ಭಾರತ, ಏಪ್ರಿಲ್ 26 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 27ರ ಭಾನುವಾರದಿಂದ ಮೇ 3 ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಕ್ರೀಡಾಪಟುಗಳಿಗೆ ವಿಶೇಷವಾದಂತಹ ಅವಕಾಶಗಳು ದೊರೆಯುತ್ತವೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸವಲ್ಲದೆ ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಿರಿ. ಇಂದಿನ ಜೀವನದಲ್ಲಿ ನಿರೀಕ್ಷಿತ ಬದಲಾವಣೆಗಳು ಕಂಡುಬರುತ್ತವೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ನಿಮಗೆ ಅತಿ ಹೆಚ್ಚಿನ ಕೌಟುಂಬಿಕ ಜವಾಬ್ದಾರಿ ದೊರೆಯುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಇ...