ಭಾರತ, ಮಾರ್ಚ್ 9 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರಿಗೆ 2025ರ ಮಾರ್ಚ್ 9 ರಿಂದ 15ರ ವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಎದುರಾಗುವ ಅಡ್ಡಿ ಆತಂಕಗಳಿಂದ ಪಾರಾಗುವಿರಿ. ಆರಂಭಿಸಿದ ಕೆಲಸವನ್ನು ಪೂರ್ಣಗೊಳಿಸುವ ಚಾತುರ್ಯತೆ ಇರುತ್ತದೆ. ಉದ್ಯೋಗದಲ್ಲಿ ಅಧಿಕಾರಯುತ ಸ್ಥಾನ ಮಾನ ದೊರೆಯುತ್ತದೆ. ಸರ್ಕಾರದ ಅಧೀನದಲ್ಲಿ ವ್ಯಾಪಾರವನ್ನು ಅರಂಭಿಸುವಿರಿ. ಸಾರ್ವಜನಿಕ ಜೀವನದಲ್ಲಿ ಗೌರವಯುತ ಸ್ಥಾನ ಗಳಿಸುವಿರಿ. ಜೀವನೋಪಾಯಕ್ಕೆ ಸಾಕಾಗುವಷ್ಟು ಆದಾಯ ನಿಮ್ಮದಾಗಲಿದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಪ್ರಶಂಸೆ ಪಡೆಯುವಿರಿ. ವಿದ್ಯಾರ್ಥಿಗಳು ಕಷ್ಟ ...