Bengaluru, ಜೂನ್ 8 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 8ರ ಭಾನುವಾರದಿಂದ 14ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸದೆ ಭಾವುಕತೆಯಿಂದ ವರ್ತಿಸುವಿರಿ. ಇದರಿಂದ ಇಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುವಿರಿ. ಕೆಲವೊಮ್ಮೆ ಕೋಪದಿಂದ ವರ್ತಿಸುವಿರಿ. ಕುಟುಂಬದಲ್ಲಿ ಬೇಸರದ ಸನ್ನಿವೇಶಗಳು ಎದುರಾಗುತ್ತವೆ. ನಿಮಗೆ ಅರಿವಿಲ್ಲದಂತೆ ಹಣ ಕಾಸಿನ ವಿವಾದದಲ್ಲಿ ಸಿಲುಕುವಿರಿ. ಆತ್ಮವಿಶ್ವಾಸದಿಂದ ಉದ್ಯೋಗದಲ್ಲಿನ ಸಮಸ್ಯೆಗಳಿಂದ ಪಾರಾಗುವಿರಿ. ಆತ್ಮೀಯರ ಸಹಾಯದಿಂದ ಆಪತ್ತಿನಿಂದ ಪಾರಾಗುವಿರಿ. ಹಣಕಾಸಿನ ವಿಚಾ...