ಭಾರತ, ಏಪ್ರಿಲ್ 17 -- ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ 2025ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿದ ದಾವೆಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌, ದಾವೆಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವುದಕ್ಕೆ ಕೇಂದ್ರ ಸರ್ಕಾರಕ್ಕೆ ಒಂದು ವಾರ ಕಾಲಾವಕಾಶವನ್ನು ನೀಡಿದೆ. ಅಲ್ಲದೆ, ಮುಂದಿನ ವಿಚಾರಣಾ ದಿನಾಂಕದ ತನಕ ವಕ್ಫ್ ನೇಮಕಾತಿ ಮಾಡಬಾರದು ಹಾಗೂ ದಾಖಲೆಗಳಿಲ್ಲದ ವಕ್ಫ್ ಜಮೀನುಗಳಿಗೆ ಸಂಬಂಧಿಸಿ ಯಥಾಸ್ಥಿತಿ ಕಾಪಾಡಬೇಕು ಎಂದು ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆ ಮೇ 5ಕ್ಕೆ ನಿಗದಿಯಾಗಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ, ವಕ್ಫ್ ಬೋರ್ಡ್ ಅಥವಾ ವಕ್ಫ್ ಕೌನ್ಸಿಲ್‌ಗಳಿಗೆ ಯಾವುದೇ ನೇಮಕಾತಿ ನಡೆಯುವುದಿಲ್ಲ ಎಂದು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಮುಖ್ಯನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಪಿವಿ ಸಂಜಯ್ ಕುಮಾರ್ ಮತ್ತು ಕೆವಿ ವಿಶ್ವನಾಥನ್‌ ಅವರಿದ್ದ ನ್ಯಾಯಪೀಠ ಗುರುವಾರ (ಏಪ್ರಿಲ್ 17) ಅಪರಾಹ್ನ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿದ ದಾವೆಗಳ ವ...