Bangalore, ಮೇ 5 -- ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ. 2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ಸಂಬಂಧ ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯವು ನಾಲ್ಕು ರಾಜ್ಯ ಸರಕಾರದ ಪ್ರತಿನಿಧಿಗಳ ಸಭೆ ಕರೆದಿದೆ. ಈ ವಿಚಾರವಾಗಿ ಸಂಬಂಧಪಟ್ಟ ಸಚಿವರನ್ನು ಕರೆಸಿ ಸಭೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಿದ್ದು, 2 ದಿನಗಳಲ್ಲಿ ಅವರು ತಮ್ಮ ಅಭಿಪ್ರಾಯ ನೀಡಲಿದ್ದಾರೆ. ಇವುಗಳ ಆಧಾರದ ಮೇಲೆ ಕೇಂದ್ರ ಸಚಿವಾಲಯದ ಸಭೆಯಲ್ಲಿ ನಾವು ನಮ್ಮ ಬೇಡಿಕೆ ಪ್ರಸ್ತಾಪಿಸುತ್ತೇವೆ ಎನ್ನುವುದು ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರ ವಿಶ್ವಾಸದ ನುಡಿ.

ಜಲ ಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಆಲಮಟ್ಟಿ ಆಣೆಕಟ್ಟೆ ಎತ್ತರಿಸುವ ...