ಭಾರತ, ಮಾರ್ಚ್ 23 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್‌ 23 ರ ಭಾನುವಾರದಿಂದ ಮಾರ್ಚ್ 29ರ ಶನಿವಾರದವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಆತುರದಲ್ಲಿ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳಲು ಪ್ರಯತ್ನಿಸದಿರಿ. ಕಣ್ಣಿಗೆ ಸಂಬಂಧಿಸಿದ ದೋಷ ಇರುತ್ತದೆ. ಆರೋಗ್ಯವನ್ನು ಉಳಿಸಿಕೊಳ್ಳಲು ಹೆಚ್ಚಿನ ಗಮನ ತೋರುವುದು ಒಳ್ಳೆಯದು. ಹಣಕಾಸಿನ ವ್ಯವಹಾರದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಹಿರಿಯರ ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳಬೇಕಾದ ಅವಕಾಶವು ಕೈತಪ್ಪಲಿದೆ. ಉದ್ಯೋಗದಲ್ಲಿ ಅನಗತ್ಯ ಸಮಸ್ಯೆಗಳು ಎದುರಾಗಲಿವೆ. ಸಮಯಕ್ಕೆ ತಕ್ಕ...