ಭಾರತ, ಮೇ 26 -- ಬೆಂಗಳೂರು: 2025ರಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಕಾಶವಿದೆ. ಸರೋಜಿನಿ ದಾಮೋದರನ್ ಫೌಂಡೇಶನ್ (ಎಸ್ಡಿಎಫ್ -Sarojini Damodaran Foundation) ಕೊಡಮಾಡುವ ವಿದ್ಯಾಧನ್ ವಿದ್ಯಾರ್ಥಿವೇತನ 2025 (Vidyadhan Scholarship 2025)ಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳಬಹುದು.
ಈ ಉಪಕ್ರಮವು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿ ಹೊಂದಿದೆ. ಮಕ್ಕಳ ಸಮಗ್ರ ಅಭಿವೃದ್ಧಿಗೆ ಬೆಂಬಲ ನೀಡುವ ಸಲುವಾಗಿ ಮಾರ್ಗದರ್ಶನ, ಸಾಫ್ಟ್ ಸ್ಕಿಲ್ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನದೊಂದಿಗೆ ಆರ್ಥಿಕ ಸಹಾಯ ನೀಡುತ್ತದೆ.
ಯಶಸ್ವಿಯಾಗಿ ಅರ್ಜಿ ಸಲ್ಲಿಸಿದವರಿಗೆ ಪಿಯುಸಿ ಅಧ್ಯಯನಕ್ಕೆ ವರ್ಷಕ್ಕೆ 10,000 ರೂ. ವಿದ್ಯಾರ್ಥಿವೇತನ ಸಿಗುತ್ತದೆ. ಶೈಕ್ಷಣಿಕ ಕಾರ್ಯಕ್ಷಮತೆಯ ಆಧಾರದ ಮೇಲೆ ಪದವಿ ಕೋರ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.