ಭಾರತ, ಏಪ್ರಿಲ್ 10 -- Vidyapati Twitter Review: ಡಾಲಿ ಧನಂಜಯ್ ನಿರ್ಮಾಣದ ವಿದ್ಯಾಪತಿ ಸಿನಿಮಾ ಟೀಸರ್ ಹಾಗೂ ಟ್ರೈಲರ್ ಮೂಲಕ ಸಾಕಷ್ಟು ಸದ್ದು ಮಾಡಿತ್ತು. ಅಲ್ಲದೇ ಇದೊಂದು ಪಕ್ಕಾ ಮನೋರಂಜನಾತ್ಮಕ ಸಿನಿಮಾ ಎಂಬುದನ್ನು ಟ್ರೈಲರ್‌ ನೋಡಿಯೇ ಊಹಿಸಬಹುದಿತ್ತು. ನಾಗಭೂಷಣ್ ನಟಿಸಿದ್ದು ಕೆಲವೇ ಚಿತ್ರಗಳಾದರೂ ಅವರು ತಮ್ಮದೇ ಅಭಿಮಾನಿ ಬಳಗ ಹೊಂದಿದ್ದಾರೆ. ವಿದ್ಯಾಪತಿ ಸಿನಿಮಾ ಇಂದು (ಏಪ್ರಿಲ್ 10) ತೆರೆ ಕಂಡಿದ್ದು, ಸಿನಿಮಾ ನೋಡಿದವರು ಮೆಚ್ಚಿಕೊಂಡಿದ್ದಾರೆ. ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುವ ಹೊತ್ತಿಗೆ ಮನೆಮಂದಿಯೆಲ್ಲಾ ಥಿಯೇಟರ್‌ಗೆ ಹೋಗಿ ನೋಡಬಹುದಾದ ಸಿನಿಮಾ ಎಂದು ಸಿನಿ ಪ್ರೇಕ್ಷಕರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ವಿದ್ಯಾಪತಿಗೆ ನಾಯಕಿಯಾಗಿ ಮಲೈಕಾ ಟಿ ವಸುಪಾಲ್ ನಟಿಸಿದ್ದಾರೆ. ಈ ಚಿತ್ರಕ್ಕೆ ಚಿತ್ರಕ್ಕೆ ಇಶಾಂ ಹಾಗೂ ಹಸೀಂ ಖಾನ್ ನಿರ್ದೇಶನ ಮಾಡಿದ್ದಾರೆ. ಕಥೆ ಬರೆದು, ಸಂಕಲನವನ್ನೂ ಅವರೇ ಮಾಡುತ್ತಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರಳಿ ನೃತ್ಯ ನಿರ್ದೇಶನ ಈ ಚಿತ್ರಕ...