Mysuru, ಫೆಬ್ರವರಿ 28 -- ಮೈಸೂರು: ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರ ಜತೆಗೆ ವಿದ್ಯುತ್‌ ಉಳಿತಾಯ, ಫೀಡರ್‌ ನಿರ್ವಹಣೆ ಹೀಗೆ ಹಲವು ವಿಭಾಗಗಳಲ್ಲಿ ಬದ್ಧತೆಯೊಂದಿಗೆ ಕಾರ್ಯನಿರ್ವಹಣೆ ಮಾಡಿರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ವು ಪವರ್ ಫೈನಾನ್ಸ್ ಕಾರ್ಪೊರೇಷನ್ (PFC) ಆಫ್ ಇಂಡಿಯಾ ನೀಡುವ ರೇಟಿಂಗ್‌ನಲ್ಲಿ "ಎ" ಶ್ರೇಣಿಗೆ ಉನ್ನತೀಕರಣಗೊಂಡಿದೆ. ಸೆಸ್ಕ್ ನ ನಿರಂತರ ಪರಿಶ್ರಮ, ಉತ್ಕೃಷ್ಟತೆಯ ಬದ್ಧತೆಯಿಂದ ರಾಷ್ಟ್ರೀಯ ಮಟ್ಟದಲ್ಲಿ ಕಂಪನಿಗಳ ಶ್ರೇಯಾಂಕ ನೀಡುವ ಪವರ್‌ ಫೈನಾನ್ಸ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ ಅವರು ನೀಡುವ ರೇಟಿಂಗ್‌ನಲ್ಲಿ ಸೆಸ್ಕ್ "ಬಿ" ಶ್ರೇಣಿಯಿಂದ "ಎ" ಶ್ರೇಣಿಗೆ ಉನ್ನತೀಕರಣಗೊಂಡಿದೆ. ಆ ಮೂಲಕ "ಎ" ಶ್ರೇಯಾಂಕ ಪಡೆದಿರುವ ರಾಜ್ಯದ ಏಕೈಕ ಎಸ್ಕಾಂ ಎಂಬ ಹೆಗ್ಗಳಿಕೆಗು ಪಾತ್ರವಾಗಿದೆ.

ಸೆಸ್ಕ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಉತ್ತಮ ಕಾರ್ಯನಿರ್ವಹಣೆಯಿಂದಾಗಿ ಈ ಶ್ರೇಯಾಂಕ ಪಡೆಯಲು ಸಾಧ್ಯವಾಗಿದೆ. ದೇಶದ ಎಲ್ಲಾ ಎಸ್ಕಾಂಗಳ ಸೇವೆಯನ್ನು ಪವರ್ ಫೈನಾನ್ಸ್ ...