Bengaluru, ಮಾರ್ಚ್ 10 -- ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರನ್ನು ಡಿಆರ್‌ಐ ಅಧಿಕಾರಿಗಳು ಇಂದು ಕೋರ್ಟ್‌ಗೆ ಹಾಜರುಪಡಿಸುತ್ತಿದ್ದಾರೆ. ರನ್ಯಾ ಅವರನ್ನು ಕಸ್ಟಡಿಗೆ ಪಡೆದಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ನಿರಂತರ ತನಿಖೆ ನಡೆಸುತ್ತಿದ್ದಾರೆ. ಇಂದಿಗೆ ಕಸ್ಟಡಿ ಅವಧಿ ಪೂರ್ಣಗೊಳ್ಳುವುದರಿಂದ ಕೋರ್ಟ್‌ ಮುಂದೆ ಹಾಜರುಪಡಿಸಬೇಕಿದೆ. ಆದರೆ, ಡಿಆರ್‌ಐ ಅಧಿಕಾರಿಗಳ ವಿಚಾರಣೆಗೆ ರನ್ಯಾ ಸರಿಯಾಗಿ ಸ್ಪಂದಿಸಿಲ್ಲ ಎಂದು ತಿಳಿದುಬಂದಿದೆ. ಈ ನಡುವೆ ರನ್ಯಾ ಕೇಸ್‌ ಕುರಿತು ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿಯೂ ಚರ್ಚೆ ನಡೆದಿದೆ.

ಡಿಆರ್‌ಐ ಅಧಿಕಾರಿಗಳು ರನ್ಯಾ ಅವರನ್ನು ವಶಕ್ಕೆ ಪಡೆದ ದಿನದಿಂದ ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ರನ್ಯಾ ಮಾತ್ರ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಒಂದೇ ಸಮನೆ ಅಳುತ್ತಿರುವ ನಟಿ, ತಾನು ಏನೂ ತಪ್ಪು ಮಾಡಿಲ್ಲ, ಈ ಪ್ರಕರಣದಲ್ಲಿ ಸಿಕ್ಕಿಬೀಳುವಂತೆ ಮಾಡಲಾಗ...