ಭಾರತ, ಫೆಬ್ರವರಿ 4 -- ಬೆಂಗಳೂರು: ವಿಧಾನಸೌಧದ ಸುತ್ತಮುತ್ತ ಬೀದಿ ನಾಯಿಗಳ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಶ್ವಾನಗಳು ಶಕ್ತಿಸೌಧದ ಆವರಣ ಪ್ರವೇಶಿಸಿ‌ ಆಶ್ರಯ ಪಡೆಯುತ್ತಿರುತ್ತವೆ. ನಾಯಿಗಳ ಸಂಖ್ಯೆ ಮಿತಿ ಮೀರಿದ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನಾಯಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ, ಅವುಗಳ ಸುರಕ್ಷತೆಯ ನಿಟ್ಟಿನಲ್ಲಿ ವಿಧಾನಸೌಧದ ಆವರಣದಲ್ಲೇ ಆಶ್ರಯ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ.

ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದಲ್ಲಿ ಇಂದು (ಫೆ.4, ಮಂಗಳವಾರ) ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಮತ್ತು ಶ್ವಾನಗಳ ರಕ್ಷ‌ಣೆ ಸಂಬಂಧಿಸಿದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಯಿತು. ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡಾ ಪಾಲ್ಗೊಂಡಿದ್ದರು. ಇವರೊಂದಿಗೆ ಆರೋಗ್...