ಭಾರತ, ಫೆಬ್ರವರಿ 3 -- ಮಂಗಳೂರು: ವಿಧಾನಸೌಧದಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ಶೀಘ್ರದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಅಧ್ಯಕ್ಷ ಯು. ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸೌಧ ಬಳಿ ಹಿಂದಿನಿಂದಲೂ ನಾಯಿಗಳ ಹಾವಳಿ ಇದೆ. ವಿಧಾನಸೌಧ ಬಳಿ ಇರುವ ನಾಯಿಗಳ ಬಗ್ಗೆ ಸಾರ್ವಜನಿಕರದು ಭಿನ್ನ ಅಭಿಪ್ರಾಯಗಳಿದೆ. ಕೆಲವರು ನಾಯಿಯಿಂದ ಯಾವುದೇ ಸಮಸ್ಯೆ ಇಲ್ಲವೆಂದರೆ, ಇನ್ನೂ ಕೆಲವರು ನಾಯಿಗಳಿಂದ ಸಮಸ್ಯೆ ಆಗುತ್ತದೆ ಎನ್ನುತ್ತಾರೆ. ಬೆಳಗ್ಗಿನ ಸಮಯದಲ್ಲಿ ವಾಕಿಂಗ್ ಬರುವವರಿಗೂ ನಾಯಿಗಳು ತೊಂದರೆ ಕೊಡುತ್ತವೆ ಎಂಬ ಅಭಿಪ್ರಾಯವಿದೆ. ನಾಯಿಗಳು ಇಲ್ಲಿಯೇ ಬೀಡು ಬಿಟ್ಟಿದ್ದು, ಇವುಗಳ ಹಾವಳಿಯನ್ನು ತಡೆಯಲು ಮುಂದಾಗಬೇಕಾಗಿದೆ ಎಂದರು.
ಈ ನಿಟ್ಟಿನಲ್ಲಿ ಅಧಿಕಾರಿಗಳು ಶೀಘ್ರದಲ್ಲಿ ಸಭೆ ನಡೆಸಲಿದ್ದಾರೆ. ವಿಧಾನಸಭೆಯ ಚೀಫ್ ಸೆಕ್ರೆಟರಿ, ಪ್ರಾಣಿ ದಯಾ ಸಂಘದ ಸದಸ್ಯರು ಈ ಸಭೆಯಲ್ಲಿ ಇರಲಿದ್ದಾರೆ. ಈ ಸಭೆಯಲ್ಲಿ ವಿಧಾನಸೌಧದ ಬಳಿ ಇರುವ ನಾಯಿಗಳ ಬಗ್ಗೆ ನಿರ್ಧಾರ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.