ಭಾರತ, ಮಾರ್ಚ್ 11 -- ಬೆಂಗಳೂರು: ರಾಜಕಾರಣಿಯೊಬ್ಬರ ಹತ್ತಿರ ನೀನು ನನಗೆ 15 ಕೋಟಿ ರೂ. ಕೊಡಿಸಿದರೆ ನಾನು ಮಾಫಿ ಸಾಕ್ಷಿ ಆಗುತ್ತೇನೆ. ಮಾಜಿ ಸಚಿವ ವಿನಯ ಕುಲಕರ್ಣಿ ಅವರ ರಾಜಕೀಯ ಭವಿಷ್ಯವನ್ನುಮುಗಿಸಿ ಅವರನ್ನು ಕೊಲೆ ಕೇಸಿನಲ್ಲಿ ಸಿಕ್ಕಿ ಹಾಕಿಸುತ್ತೇನೆ. ಈ ರೀತಿ ಬಸವರಾಜ ಮುತ್ತಗಿ ಎಂಬಾತ ಉದ್ಯಮಿ ಐಶ್ವರ್ಯಾ ಗೌಡ ಅವರಿಗೆ ಮಾತುಕೊಟ್ಟಿದ್ದಾರೆ ಎಂಬ ಸ್ಫೋಟಕ ಮಾಹಿತಿಯನ್ನು ವಿನಯ ಕುಲಕರ್ಣಿ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿಯನ್ನು ಮೂರನೇ ಬಾರಿಗೆ ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನಿಸಿದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಸೋಮವಾರ ಈ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ವಿನಯ ಕುಲಕರ್ಣಿ ಪರ ಹಿರಿಯ ವಕೀಲರು ವಿಷಯವನ್ನು ಕೋರ್ಟ್‌ ಗಮನಕ್ಕೆ ತಂದರು.

ಈ ಪ್ರ...