Bangalore, ಮಾರ್ಚ್ 11 -- ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿರುವ ನಟಿ ರನ್ಯಾರಾವ್‌ ಅವರು ಶಿಷ್ಟಾಚಾರ ದುರ್ಬಳಕೆ ಮಾಡಿಕೊಂಡಿರುವುದು ಹಾಗೂ ಶಿಷ್ಟಾಚಾರ ಬಳಸಿಕೊಳ್ಳಲು ಸಹಕಾರ ನೀಡಿದ ಕುರಿತು ರನ್ಯಾ ಅವರ ಮಲ ತಂದೆ ಕರ್ನಾಟಕದ ಹಿರಿಯ ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅವರ ಪಾತ್ರದ ಕುರಿತು ತನಿಖೆ ನಡೆಸಲು ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿದೆ. ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಗೌರವ ಗುಪ್ತ ಅವರನ್ನು ತನಿಖಾಧಿಕಾರಿಯನ್ನು ನೇಮಿಸಲಾಗಿದೆ. ಒಂದು ವಾರದೊಳಗೆ ಈ ಪ್ರಕರಣದ ಕುರಿತು ತನಿಖೆಯನ್ನು ನಡೆಸಿ ವರದಿ ನೀಡುವಂತೆ ಸಿಬ್ಬಂದಿ ಹಾಗೂ ಅಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ವಿಮಾನ ನಿಲ್ದಾಣ ಸಹಿತ ಪ್ರಮುಖ ಭದ್ರತಾ ಮಹತ್ವ ಇರುವ ಸ್ಥಳಗಳಲ್ಲಿ ವಿವಿಐಪಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಕೆಲವು ರಿಯಾಯಿತಿ ಇರಲಿವೆ. ಆದರೆ ಅದನ್ನು ದುರ್ಬಳಕೆ ಮಾಡಿರುವ ಮಾರ್ಗಗಳ ಕುರಿತು ತನಿಖೆಯನ್ನು ನಡೆಸಲಾಗುತ್ತದೆ. ವಿಮಾನ ನಿಲ್ದಾಣದ ಭ...