ಭಾರತ, ಮಾರ್ಚ್ 22 -- ಕೃನಾಲ್ ಪಾಂಡ್ಯ ಅವರ ಅದ್ಭುತ ಬೌಲಿಂಗ್ (29/3) ಜೊತೆಗೆ ವಿರಾಟ್ ಕೊಹ್ಲಿ (59*), ಫಿಲ್ ಸಾಲ್ಟ್ (55) ಅವರ ಅಬ್ಬರದ ಬ್ಯಾಟಿಂಗ್ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆದ್ದು 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ ಅಭಿಯಾನ ಆರಂಭಿಸಿದೆ. ಈ ಸೋಲಿನೊಂದಿಗೆ ಹಾಲಿ ಚಾಂಪಿಯನ್ ತಮ್ಮ ತವರಿನ ಅಭಿಮಾನಿಗಳ ಮುಂದೆ ಮುಖಭಂಗಕ್ಕೆ ಒಳಗಾಯಿತು. ಇದರೊಂದಿಗೆ 2008ರ ಉದ್ಘಾಟನಾ ಆವೃತ್ತಿಯ ಉದ್ಘಾಟನಾ ಪಂದ್ಯದ ಸೋಲಿಗೆ ಅದೇ ಉದ್ಘಾಟನಾ ಪಂದ್ಯದಲ್ಲಿ ಸೇಡು ತೀರಿಸಿಕೊಂಡಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ 7 ವಿಕೆಟ್​ಗಳ ಗೆಲುವು ಸಾಧಿಸಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟೀದಾರ್ ಟಾಸ್ ಗೆದ್ದು ಅಜಿಂಕ್ಯ ರಹಾನೆ ನೇತೃತ್ವದ ತಂಡಕ್ಕೆ ಬ್ಯಾಟಿಂಗ್ ಆಹ್ವಾನ ಮಾಡಿದರು. ಅದರಂತೆ ಬ್ಯಾಟಿಂಗ್ ನಡೆಸಿದ ಕೆಕೆಆರ್, ರಹಾನೆ ಅವರ ಸ್ಫೋಟಕ ಅರ್ಧಶತಕದ ಸಹಾಯದಿಂದ 8 ವಿಕೆಟ್ ನಷ್ಟಕ್ಕೆ 174 ರನ್...