ಭಾರತ, ಫೆಬ್ರವರಿ 23 -- ವಿರಾಟ್ ಕೊಹ್ಲಿ ಅವರ ಅಜೇಯ ಶತಕದ (100) ಸಹಾಯದಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿ 2017ರ ಫೈನಲ್ ಸೋಲಿನ ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶ ಬಹುತೇಕ ಖಾತ್ರಿಪಡಿಸಿಕೊಂಡಿದೆ. ಇದರೊಂದಿಗೆ ಚಾಂಪಿಯನ್ಸ್​ ಟ್ರೋಫಿ ಇತಿಹಾಸದಲ್ಲಿ 3-3ರಲ್ಲಿ ಸಮಬಲ ಸಾಧಿಸಿತು. ಆದರೆ ಸತತ ಎರಡು ಸೋಲುಗಳೊಂದಿಗೆ ಮಹತ್ವದ ಟೂರ್ನಿಗೆ ಆತಿಥ್ಯ ವಹಿಸಿರುವ ಪಾಕಿಸ್ತಾನ ಟೂರ್ನಿಯಿಂದಲೇ ಹೊರಬಿದ್ದಿದೆ. ದುಬೈ ಇಂಟರ್​ನ್ಯಾಷನಲ್​ ಕ್ರಿಕೆಟ್ ಮೈದಾನದಲ್ಲಿ ಪಾಕ್ ಒಡ್ಡಿದ್ದ 242 ರನ್​ ಗುರಿಯನ್ನು ಭಾರತ 42.3 ಓವರ್​​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಗೆಲುವಿನ ಗೆರೆ ದಾಟಿತು.

242 ರನ್ ಬೆನ್ನಟ್ಟಿದ ಭಾರತ ಬಿರುಸಿನ ಆರಂಭ ಪಡೆಯಿತು. ವೇಗದ ಆಟಕ್ಕೆ ಒತ್ತು ಕೊಟ್ಟ ನಾಯಕ ರೋಹಿತ್ ಶರ್ಮಾ 15 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ 20 ರನ್ ಗಳಿಸಿ ನಿರಾಸೆ ಮೂಡಿಸಿದರು. ಶಾಹೀನ್ ಅಫ್ರಿದಿ ಪಾಕ್​ಗೆ ಆರಂಭದ...