ಭಾರತ, ಮೇ 25 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 25ರ ಭಾನುವಾರದಿಂದ ಮೇ 31ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ.

ಉತ್ತಮ ಆಹಾರ ಪದ್ಧತಿಯಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಅಜೀರ್ಣದ ತೊಂದರೆ ಇರುತ್ತದೆ. ಯಾವುದೇ ವಿಚಾರದಲ್ಲಿಯೂ ದೃಢವಾದ ನಿಲುವು ತಾಳಲು ಸಾಧ್ಯವಾಗುವುದಿಲ್ಲ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಾಯ ಸಹಕಾರ ದೊರೆಯುತ್ತದೆ. ಗುರು ಹಿರಿಯರ ಅನುಗ್ರಹ ನಿಮಗೆ ದೊರೆಯುತ್ತದೆ, ಕೌಟುಂಬಿಕ ಜೀವನದಲ್ಲಿ ಶಾಂತಿ, ನೆಮ್ಮದಿ ನೆಲೆಸಿರುತ್ತದೆ. ವಿರೋಧಿಗಳ ಉಪಠಳದಿಂದ ಮನಸ್ಥೈರ್ಯ ಕಡಿಮ...