ಭಾರತ, ಮೇ 17 -- ಹೈಪರ್‌ ಟೆನ್‌ಷನ್‌ ಅಥವಾ ಹೈ ಬಿಪಿಯನ್ನು ಸೈಲೆಂಟ್‌ ಕಿಲ್ಲರ್‌ ಎಂದು ಕರೆಯಲಾಗುತ್ತದೆ. ಇದು ಹೃದ್ರೋಗ ಸೇರಿದಂತೆ ಇತರ ದೀರ್ಘಕಾಲ ಕಾಡುವ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಸದ್ದಿಲ್ಲದೇ ದಾರಿ ಮಾಡಿಕೊಡುತ್ತದೆ. ಮನುಷ್ಯನ ದೀರ್ಘಕಾಲೀನ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ರಕ್ತದೊತ್ತಡವನ್ನು ನಿರ್ವಹಿಸುವುದು ಅತ್ಯಗತ್ಯ.

ಅಧಿಕ ರಕ್ತದೊತ್ತಡದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಹೈ ಬಿಪಿ ಗಂಭೀರತೆಯನ್ನು ಅರ್ಥ ಮಾಡಿಸುವ ಸಲುವಾಗಿ ಪ್ರತಿ ವರ್ಷ ಮೇ 17ಕ್ಕೆ ವಿಶ್ವ ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಅಧಿಕ ರಕ್ತದೊತ್ತಡಕ್ಕೆ ಸಂಬಂಧಿಸಿದ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವ, ತಡೆಗಟ್ಟುವ ಮತ್ತು ನಿರ್ವಹಣೆಗೆ ಪರಿಣಾಮಕಾರಿ ತಂತ್ರಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಗುರುಗ್ರಾಮದ ಸಿಕೆ ಬಿರ್ಲಾ ಆಸ್ಪತ್ರೆಯ ಆಂತರಿಕ ಔಷಧ ಸಲಹೆಗಾರ ಡಾ. ತುಷಾರ್ ತಯಾಲ್, ಎಚ್‌ಟಿ ಲೈಫ್‌ಸ್ಟೈಲ್‌ಗೆ ನೀಡಿದ ಸಂದರ್ಶನದಲ್ಲಿ ʼಅಧಿಕ ರಕ್ತದೊತ್ತಡವನ್ನು ಸೈಲೆಂಟ್‌ ಕಿಲ್ಲರ್‌ ಎಂದು ಕರೆಯಲಾಗುತ್ತದ...