ಭಾರತ, ಜೂನ್ 19 -- ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಸೋಮೇಶ್ವರ ಕಡಲ ತೀರದಲ್ಲಿ 'ಯೋಗ ವಿತ್ ಯೋಧ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದರು.

ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸೋಮೇಶ್ವರ ಬೀಚ್ ನ ಕಡಲ ಕಿನಾರೆಯಲ್ಲಿ ಜೂನ್‌ 21ರ ಶನಿವಾರ ಅಪರಾಹ್ನ 3 ಗಂಟೆಗೆ ನಡೆಯಲಿರುವ 'ಯೋಗ ವಿತ್ ಯೋಧ' ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ಸಾರ್ವಜನಿಕರಿಗೆ ಆಹ್ವಾನ ನೀಡಿದರು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2014ರಲ್ಲಿ ಪ್ರಸ್ತಾವನೆ ಮಾಡಿದ ನಂತರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಜೂನ್‌ 21 ಅನ್ನು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಿತ್ತು. ಅದರಂತೆ ಈ ಬಾರಿಯ ಆಚರಿಸಲಾಗುತ್ತಿರುವ 11ನೇ ವಿಶ್ವ ಯೋಗ ದಿನದ ಥೀಮ್ ʼಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ (Yoga for One Earth, One Health)ʼ ಆಗಿದ್ದು, ನಮ್ಮ ಆರೋಗ್ಯ ಮತ್ತು ಸರ...