Bengaluru,Mysuru,Chamarajanagara,ಬೆಂಗಳೂರು,ಮೈಸೂರು,ಚಾಮರಾಜನಗರ, ಏಪ್ರಿಲ್ 29 -- ಮೈಸೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಬೆಂಗಳೂರಿನಲ್ಲಿ ಇಂದು (ಏಪ್ರಿಲ್ 29) ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದೆ. ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಗಣ್ಯರು ಅಭಿಮಾನಿಗಳು ಶ್ರೀನಿವಾಸ್ ಪ್ರಸಾದ್ ಮನೆ ಸಮೀಪ ಸೇರಿದ್ದಾರೆ. ಈ ನಡುವೆ, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

"ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ತಮ್ಮ ವಿವಿಧ ಸಮಾಜ ಸೇವೆಗಾಗಿ ಬಹಳ ಜನಪ್ರಿಯರಾಗಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ. ಓಂ ಶಾಂ...