ಭಾರತ, ಫೆಬ್ರವರಿ 24 -- 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 6 ವಿಕೆಟ್ಗಳ ಐತಿಹಾಸಿಕ ಗೆಲುವು ಸಾಧಿಸಿದ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಅಲ್ಲದೆ, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಸೋಲಿನ ಸೇಡು ತೀರಿಸಿಕೊಂಡಿರುವ ಭಾರತ ತಂಡ, ಐಸಿಸಿ ಟೂರ್ನಿಗೆ ಆತಿಥ್ಯ ವಹಿಸಿರುವ ಆತಿಥೇಯರನ್ನು ಟೂರ್ನಿಯಿಂದಲೇ ಹೊರದಬ್ಬಿದೆ. ಬ್ಯಾಟಿಂಗ್ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ಅವರ 51ನೇ ಏಕದಿನ ಶತಕ ವೈಭವದ ಎದುರು ಮಂಕಾದ ಪಾಕಿಸ್ತಾನ, ತನ್ನ ನರಿ ಬುದ್ದಿಯನ್ನು ಮತ್ತೆ ತೋರಿಸಿದೆ ಎಂಬ ಟೀಕೆಗೆ ಗುರಿಯಾಗಿದೆ. ಅದಕ್ಕೆ ಕಾರಣ ಶತಕ ತಪ್ಪಿಸಲು ಪ್ರಯತ್ನಿಸಿದ್ದು ಎನ್ನಲಾಗಿದೆ.
ಪಾಕಿಸ್ತಾನ ವಿರುದ್ಧ ಗೆಲ್ಲಲು 2 ರನ್ ಹಾಗೂ ಶತಕಕ್ಕೆ 4 ರನ್ ಬೇಕಿದ್ದಾಗ ಕೊಹ್ಲಿ ಭರ್ಜರಿ ಬೌಂಡರಿ ಸಿಡಿಸಿ 51ನೇ ಶತಕ ಪೂರೈಸಿದರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ, 49.2 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 241 ರನ್ ಗಳಿಸಿತು. ಈ ಗುರಿ ಬೆನ್ನಟ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.