ಭಾರತ, ಜನವರಿ 30 -- ಬೆಂಗಳೂರು: ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಯುವಕರು ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಒಂಬತ್ತು ತಿಂಗಳು ತುಂಬಿದ ಎಲ್ಲ ಮಕ್ಕಳಿಗೂ ಸುರಕ್ಷತಾ ಹೆಲ್ಮೆಟ್‌ ಹಾಗೂ ಮಕ್ಕಳ ಸುರಕ್ಷತಾ ಸಾಧನಗಳು ಲಭ್ಯವಾಗುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಬೆಂಗಳೂರಿನ ಡಾ.ಕೆ.ಅರ್ಚನಾ ಭಟ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಬೆಂಗಳೂರಿನ ಕೆಲವು ಭಾಗಗಳಲ್ಲಿ 20 ವರ್ಷದೊಳಗಿನ ಯುವಕರು ಬೈಕ್‌ ವ್ಹೀಲಿಂಗ್ ಮಾಡುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಸುತ್ತಮುತ್ತಲಿನ ನಿವಾಸಿಗಳು ಮತ್ತು ಇತರ ವಾಹನ ಸವಾರರಿಗೆ ದೊಡ್ಡ ಪ್ರಮಾಣದಲ್ಲಿ ತೊಂದರೆ ಉಂಟಾಗುತ್ತಿದೆ. ಬೈಕ್‌ ವ್...