नई दिल्ली, ಮೇ 28 -- 18ನೇ ಆವೃತ್ತಿಯ ಐಪಿಎಲ್ ಟೂರ್ನಿಯುದ್ದಕ್ಕೂ ಕಳಪೆ ಪ್ರದರ್ಶನ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಅಂತಿಮ ಲೀಗ್ ಪಂದ್ಯದಲ್ಲಿ ಭರ್ಜರಿ ಆಟವಾಡಿದರು.

ಪ್ರಸಕ್ತ ಆವೃತ್ತಿಯಲ್ಲಿ 7 ಪಂದ್ಯಗಳಲ್ಲಿ ಒಂದಂಕಿಗೆ ಔಟಾಗಿರುವ ಪಂತ್, ಎರಡನೇ ಐಪಿಎಲ್ ಶತಕ ಸಿಡಿಸಿ ಇಂಗ್ಲೆಂಡ್ ಸರಣಿಗೂ ಮುನ್ನ ಲಯಕ್ಕೆ ಮರಳಿದ್ದಾರೆ.

ತಮ್ಮ ತವರಿನ ಮೈದಾನವಾದ ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ಆರ್​ಸಿಬಿ ವಿರುದ್ಧ 61 ಎಸೆತಗಳಲ್ಲಿ 11 ಬೌಂಡರಿ, 8 ಸಿಕ್ಸರ್​ ಸಹಿತ 118 ರನ್ ಗಳಿಸಿ ಅಜೇಯರಾಗಿ ಉಳಿದರು.

ಐಪಿಎಲ್‌ನಲ್ಲಿ 2018ರಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದ ಪಂತ್ ಇದೀಗ 7 ವರ್ಷಗಳ ನಂತರ ಐಪಿಎಲ್‌ನಲ್ಲಿ ಶತಕ ಬಾರಿಸಿದ್ದಾರೆ. ಶತಕ ಸಿಡಿಸಿದ ಕೂಡಲೇ ಪಂತ್ ವಿಚಿತ್ರವಾಗಿ ಸಂಭ್ರಮಿಸಿದ್ದು ವೈರಲ್ ಆಗಿದೆ.

ಶತಕ ಸಿಡಿಸಿದ ಕೂಡಲೇ ಮೈದಾನದಲ್ಲಿ ಪಲ್ಟಿ ಹೊಡೆದು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. ಇದೀಗ ಈ ವಿಡಿಯೋ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ....