ಭಾರತ, ಫೆಬ್ರವರಿ 20 -- ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಕ್ರಿಕೆಟ್‌ ತಂಡ ಶುಭಾರಂಭ ಮಾಡಿದೆ. ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಹಲವು ಮೈಲಿಗಲ್ಲು ಹಾಗೂ ಮಹತ್ವದ ದಾಖಲೆಗಳಿಗೆ ಸಾಕ್ಷಿಯಾದ ಪಂದ್ಯದಲ್ಲಿ ರೋಹಿತ್‌ ಶರ್ಮಾ ಪಡೆ ಗೆಲುವು ಒಲಿಸಿಕೊಂಡಿತು. ಬೌಲಿಂಗ್‌ನಲ್ಲಿ ಮಿಂಚಿದ ಮೊಹಮ್ಮದ್‌ 5 ವಿಕೆಟ್‌ ಕಬಳಿಸಿದರು. ಬ್ಯಾಟಿಂಗ್‌ನಲ್ಲಿ ಜವಾಬ್ದಾರಿಯುತ ಆಟವಾಡಿದ ಶುಭ್ಮನ್‌ ಗಿಲ್‌, ಆಕರ್ಷಕ ಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 49.4 ಓವರ್‌ಗಳಲ್ಲಿ 228 ರನ್‌ ಗಳಿಸಿತು. ಇದಕ್ಕೆ ಪ್ರತಿಯಾಗಿ ಭಾರತ ತಂಡವು 4 ವಿಕೆಟ್‌ ಕಳೆದುಕೊಂಡು 231 ರನ್‌ ಗಳಿಸಿ ಗೆಲುವಿನೊಂದಿಗೆ ಶುಭಾರಂಭ ಮಾಡಿತು.

ಬಾಂಗ್ಲಾದೇಶದ ಪರ ತೌಹಿದ್ ಹೃದೋಯ್ ದಿಟ್ಟ ಹೋರಾಟ ನಡೆಸಿ ಚೊಚ್ಚಲ ಏಕದಿನ ಶತಕ ಸಿಡಿಸಿದರು. ಇವರ ಆಟವು ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಜೀವಂತವಾಗಿರಿಸಿತು. 118 ಎಸೆತ ಎದುರಿಸಿದ ಅವರು 100 ರನ್‌ ಗ...