ಭಾರತ, ಏಪ್ರಿಲ್ 11 -- Shahapur Accident: ಬೊಲೆರೋ ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಮದ್ದರಕಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ.

ಮೃತರನ್ನು ಚಾಲಕ ಶರಣಪ್ಪ (30), ಸುನೀತಾ (19), ಸೋಮವ್ವ (50), ತಂಗಮ್ಮ (50) ಎಂದು ಗುರುತಿಸಲಾಗಿದೆ. ಬೊಲೆರೋ ವಾಹನದಲ್ಲಿ ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published by HT Digital Content Services with permission from HT Kannada....