ಭಾರತ, ಮಾರ್ಚ್ 27 -- ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಕೊನೆಯ ಹಂತದಲ್ಲಿ ಅನಿರೀಕ್ಷಿತ ಸೋಲು ಕಂಡಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್‌ 2025ರ ಆವೃತ್ತಿಯಲ್ಲಿ ಗೆಲುವಿನ ಹಳಿಗೆ ಮರಳಿದೆ. ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶಾರ್ದುಲ್‌ ಠಾಕೂರ್‌ ಮಾರಕ ಬೌಲಿಂಗ್‌ ಹಾಗೂ ನಿಕೋಲಸ್‌ ಪೂರನ್‌ ಬೊಂಬಾಟ್‌ ಬ್ಯಾಟಿಂಗ್‌ ನೆರವಿಂದ ರಿಷಬ್‌ ಪಂತ್‌ ಬಳಗಕ್ಕೆ ಮೊದಲ ಗೆಲುವು ಒಲಿದಿದೆ. ಇದರೊಂದಿಗೆ ಅಂಕಪಟ್ಟಿಯಲ್ಲೂ ಖಾತೆ ತೆರೆದಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಸನ್‌ರೈಸರ್ಸ್‌ ಹೈದರಾಬಾದ್‌ 9 ವಿಕೆಟ್‌ ನಷ್ಟಕ್ಕೆ 190 ರನ್‌ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್‌ ನಡೆಸಿದ ಲಕ್ನೋ, ಕೇವಲ 16.1 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಗುರಿ ತಲುಪುವ ಮೂಲಕ 5 ವಿಕೆಟ್‌ಗಳಿಂದ ಗೆಲುವಿನ ನಗೆ ಬೀರಿತು.

(ಸುದ್ದಿ ಅಪ್ಡೇಟ್‌ ಆಗುತ್ತಿದೆ)

Published by HT Digital Conte...