Bengaluru, ಮೇ 29 -- ಬೆಂಗಳೂರು: ನಗರದಲ್ಲಿ ಶಾಲೆಗಳು ಆರಂಭವಾಗಿವೆ, ಇನ್ನೂ ಕೆಲವು ಶಾಲೆಗಳು ಜೂನ್‌ ಮೊದಲ ವಾರದಲ್ಲಿ ಆರಂಭವಾಗಲಿವೆ. ಆದರೆ ಬೆಂಗಳೂರಿನ ರಸ್ತೆಗಳು ಶಾಲಾ ಮಕ್ಕಳನ್ನು ಸ್ವಾಗತಿಸಲು ಸಜ್ಜಾಗಿವೆಯೇ ಎಂಬ ಪ್ರಶ್ನೆಗೆ ನಕಾರಾತ್ಮಕ ಉತ್ತರ ದೊರೆಯುತ್ತದೆ. ನಗರದ ಯಾವುದೇ ಭಾಗಕ್ಕೆ ಹೋದರೂ ರಸ್ತೆಗಳನ್ನು ಅಗೆದಿರುವ ದೃಶ್ಯಗಳನ್ನು ಧಾರಾಳವಾಗಿ ಕಾಣಬಹುದು. ಜತೆಗೆ ಮಳೆಗಾಲ ಆರಂಭವಾಗಿದ್ದು, ರಸ್ತೆಗಳು ಮತ್ತಷ್ಟು ಹಾಳಾಗಿವೆ. ಗುಂಡಿಗಳ ಮಧ್ಯೆ ರಸ್ತೆಯನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರೂ ದಿಗಿಲುಪಡುತ್ತಿದ್ದಾರೆ. ಶಾಲೆಗಳನ್ನು ತಲುಪುವುದು ಮಕ್ಕಳಿಗೆ ಸವಾಲಾಗಿ ಪರಿಣಮಿಸಿದೆ. ಈ ಮಧ್ಯೆ ಮಲ್ಲಸಂದ್ರದ ಶ್ರೀ ಕುಮಾರನ್‌ ಶಾಲೆಯ ಆಡಳಿತ ಮಂಡಳಿ ರಸ್ತೆಗಳನ್ನು ಸರಿಪಡಿಸುವಂತೆ ಸರ್ಕಾರಕ್ಕೆ ಪತ್ರ ಬರೆಯುವಂತೆ ಪೋಷಕರಿಗೆ ಸಲಹೆ ನೀಡಿದೆ. ಅಂತಹ ಒತ್ತಡ ಹೇರಿದಕ್ಕಾದರೂ ರಸ್ತೆಗಳನ್ನು ಸರಿಪಡಿಸಬಹುದು ಎಂಬ ನಿರೀಕ್ಷೆ ಅವರದ್ದು.

ನಗರದ ಬಹುತೇಕ ಭಾಗಗಳಲ್ಲಿ ವೈಟ್‌ ಟಾಪ...