ಭಾರತ, ಮಾರ್ಚ್ 7 -- ಬೆಂಗಳೂರು: ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚೆಲುವರಾಜು ಎಂಬವವರಿಂದ ಹಣ ಪಡೆದು ವಂಚಿಸಿದ ಮತ್ತು ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ವಿರುದ್ಧ ದಾಖಲಾದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ (ಬಿಬಿಎಂಪಿ) ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚಲುವರಾಜು ಅವರು ಮುನಿರತ್ನ ವಿರುದ್ಧ ದೂರು ದಾಖಲಿಸಿದ್ದರು. ಶಾಸಕ ಮುನಿರತ್ನ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿ ವಜಾಗೊಳಿಸಿ ಇಂದು ಆದೇಶ ಹೊರಡಿಸಿದೆ.

ಅಲ್ಲದೇ, ಪ್ರಕರಣದ ವಿಚಾರಣೆಗೆ ವಿಶೇಷ ತನಿಖಾ ದಳ(ಎಸ್ಐಟಿ) ರಚನೆ ಮಾಡಿರುವ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಸರ್ಕಾರ, ಆದೇಶಗಳನ್ನು ಹೊರಡಿಸುವ ಸಂದರ್ಭದಲ್ಲಿ ನಿಯಮಗಳನ್ನು ಅನುಸರಿಸಬೇ...