ಭಾರತ, ಏಪ್ರಿಲ್ 9 -- ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಆರು ವರ್ಷದ ಯಶವಂತ್ ಎಂಬ ಬಾಲಕ ತನ್ನ ಬಲಗಣ್ಣಿನ ದೃಷ್ಟಿಯನ್ನು ಶಾಶ್ವತವಾಗಿ ಕಳೆದುಕೊಂಡಿದ್ದಾನೆ. ಇದಕ್ಕೆ ಕಾರಣ ಒಂದು ವರ್ಷದ ಹಿಂದೆ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಮಾಡಿದ ಗಾಯದಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಈಗ ಶಿಕ್ಷಕಿ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರ ಐದು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಘಟನೆ ಮಾರ್ಚ್ 6, 2024 ರಂದು ಸರ್ಕಾರಿ ಶಾಲೆಯಲ್ಲಿ ನಡೆದಿದ್ದು, ಆಗ ಯಶ್ವಂತ್ 1 ನೇ ತರಗತಿಯಲ್ಲಿ ಓದುತ್ತಿದ್ದ. ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಶಿಸ್ತಿನಿಂದ ಕೂರಿಸಲು ಪ್ರಯತ್ನಿಸುತ್ತಿದ್ದಾಗ, ಶಿಕ್ಷಕಿಯೊಬ್ಬರು ಮಕ್ಕಳ ಗುಂಪಿನತ್ತ ಕೋಲನ್ನು ಎಸೆದಿದ್ದಾರೆ ಎನ್ನಲಾಗಿದೆ. ಕೋಲು ಬಾಲಕ ಯಶ್ವಂತ್ ಬಲಗಣ್ಣಿಗೆ ತಗುಲಿ, ಆ ಸಮಯದಲ್ಲಿ ಸಣ್ಣಪುಟ್ಟ ಗಾಯವಾಗಿತ್ತು.

ಆರಂಭದಲ್ಲಿ, ಹುಡುಗನ ಪೋಷಕರು ಗಾಯದ ಗಂಭೀರತೆಯನ್ನು ಗ್ರ...