Bangalore, ಏಪ್ರಿಲ್ 4 -- ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2025-26 ನೇ ಸಾಲಿನ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಈಗಾಗಲೇ ಈ ಬಾರಿಯ ಎಲ್ಲಾ ಪರೀಕ್ಷೆಗಳು ಮುಗಿದು ಫಲಿತಾಂಶ ಪ್ರಕಟಣೆ ಮಾತ್ರ ಬಾಕಿ ಇದೆ. ಈ ಶೈಕ್ಷಣಿಕ ವರ್ಷದ ಬೇಸಿಗೆ ರಜೆಗಳು ಆರಂಭವಾಗುವ ಮುನ್ನವೇ ಮುಂದಿನ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬಿಡುಗಡೆ ಮಾಡಲಾಗಿದೆ. ಮುಂದಿನ ಸಾಲಿನ ತಿಂಗಳುವಾರು ಶಾಲೆಗಳು ಹಾಗೂ ರಜೆ ದಿನಗಳು, ಶೈಕ್ಷಣಿಕ ಚಟುವಟಿಕೆಗಳ ವಿವರಗಳನ್ನು ಆದೇಶದಲ್ಲಿ ವಿವರಿಸಲಾಗಿದೆ.ಕರ್ನಾಟಕ ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಂದಿನ ಶೈಕ್ಷಣಿಕ ವರ್ಷದ ಶೈಕ್ಷಣಿಕ ಅವಧಿ ಹಾಗೂ ರಜಾ ಅವಧಿಗಳನ್ನು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಪತ್ರ ಆಧರಿಸಿ ರೂಪಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದಲ್ಲಿ ಶಾಲಾ ಶಿಕ್ಷಣ ಚಟುವಟಿಕೆಗಳಿಗೆ ಸಂಬಂದಿಸಿದಂತೆ ಈಗಾಗಲೇ 2024- 25 ನೇ ಸಾಲಿನ ಚಟುವಟಿಕ...