ಭಾರತ, ಫೆಬ್ರವರಿ 26 -- ಮಂಗಳೂರು : ಮಂಜುನಾಥನ ನೆಲೆ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಶಿವರಾತ್ರಿ ಹಿನ್ನೆಲೆಯಲ್ಲಿ ಪಾದಯಾತ್ರೆ ಮೂಲಕ ಬಂದ ಭಕ್ತರೂ ಸೇರಿದಂತೆ, ಸೇರಿದ ಅಪಾರ ಸಂಖ್ಯೆಯ ಶಿವಭಕ್ತರು ಕರ್ನಾಟಕದ ಪ್ರಸಿದ್ಧ ಶಿವಸಾನಿಧ್ಯವಾದ ಕರಾವಳಿಯ ಪ್ರಮುಖ ತಾಣ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೇರಿದ್ದಾರೆ. ಬುಧವಾರ (ಫೆ.26) ಸಂಜೆ ಶಿವಪಂಚಾಕ್ಷರಿ ಮಂತ್ರ ಪಠಣದೊಂದಿಗೆ ಶಿವರಾತ್ರಿ ಜಾಗರಣೆ ಆರಂಭಿಸಿದ್ದಾರೆ.

ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿ, ಶಿವರಾತ್ರಿ ಅಂದರೆ ಪವಿತ್ರ ಹಾಗೂ ಮಂಗಳಕರ ರಾತ್ರಿ ಎಂದು ಅರ್ಥ. ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ ಕಳೆದು ಪುಣ್ಯ ಸಂಚಯವಾಗುತ್ತದೆ. ತ್ಯಾಗ ಮತ್ತು ವಿರಕ್ತಿಯಿಂದ ಶಾಂತಿ, ನೆಮ್ಮದಿ ಸಿಗುತ್ತದೆ. ಜಪ-ತಪ, ಧ್ಯಾನದೊಂದಿಗೆ ವೃತ ನಿಯಮಗಳ ಪಾಲನೆ ಮಾಡಿದಾಗ ಜೀವನ ಪಾವನವಾಗುತ...