ಭಾರತ, ಫೆಬ್ರವರಿ 25 -- ಫೆ.28ರ ರಾತ್ರಿ 8ರವರೆಗೆ ದ್ವಾದಶ ಜ್ಯೋತಿರ್ಲಿಂಗ ದರ್ಶನಕ್ಕೆ ಅವಕಾಶ ಸಿಗಲಿದೆ.

ಪ್ರತಿದಿನ ಬೆಳಗ್ಗೆ 9ರಿಂದ ರಾತ್ರಿ 8ರವರೆಗೆ ಇಲ್ಲಿ ಸಾರ್ವಜನಿಕರು ಆಗಮಿಸಿ ಉಚಿತವಾಗಿ ಪ್ರದರ್ಶನ ವೀಕ್ಷಿಸಬಹುದು.

ಮಾಹಿತಿಯನ್ನು ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ವಯಂಸೇವಕರು ನೀಡುತ್ತಾರೆ ಎಂದು ರಾಜಯೋಗಿನಿ ಬ್ರಹ್ಮಾಕುಮಾರಿ ಸಾವಿತ್ರಿ ಹಾಗೂ ರಾಜಯೋಗಿ ಬ್ರಹ್ಮಾಕುಮಾರ ಗಣಪತಿ ಅವರು ತಿಳಿಸಿದ್ದಾರೆ.

ಸೋಮನಾಥ, ಮಲ್ಲಿಕಾರ್ಜುನ, ಮಹಾಕಾಲೇಶ್ವರ, ಓಂಕಾರೇಶ್ವರ, ವೈದ್ಯನಾಥ, ಭೀಮಾಶಂಕರ, ರಾಮೇಶ್ವರ, ನಾಗೇಶ್ವರ, ವಿಶ್ವನಾಥ, ತ್ರಯಂಭಕೇಶ್ವರ, ಕೇದಾರನಾಥ, ಗ್ರೀಷ್ಣೇಶ್ವರ ಹೀಗೆ 12 ಜ್ಯೋತಿರ್ಲಿಂಗಗಳ ಪ್ರತಿಕೃತಿಯನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ದ್ವಾದಶ ಜ್ಯೋತಿರ್ಲಿಂಗ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಫೆ.26ರ ಬುಧವಾರ ಶಿವರಾತ್ರಿ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮಾಡಲಾಗಿದ್ದು, ಈ ತಿಂಗಳ ಕೊನೆಯವರೆಗೂ ಜ್ಯೋತಿರ್ಲಿಂಗ ದರ್ಶನ ಮಾಡಬಹುದು...