ಭಾರತ, ಫೆಬ್ರವರಿ 19 -- ಶಿವಾಜಿ ಜಯಂತಿಯ ಪ್ರಯುಕ್ತ 'ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್' ಚಿತ್ರತಂಡ ಹೊಸ ಅಪ್‌ಡೇಟ್‌ ನೀಡಿದೆ. ವಾಜಿ ಮಹಾರಾಜರ ಜೀವನವನ್ನು ಆಧರಿಸಿದ ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಶಿವಾಜಿ ಮಹರಾಜರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಟಾರ್ ಡೈರೆಕ್ಟರ್​​ ಸಂದೀಪ್ ಸಿಂಗ್ ಈ ಚಿತ್ರದ ಸಾರಥ್ಯ ವಹಿಸಿದ್ದಾರೆ. ಈ ಚಿತ್ರದಲ್ಲಿ ಕೆಲಸ ಮಾಡುತ್ತಿರುವವರ ಹೆಸರನ್ನು ಇತ್ತೀಚೆಗೆ ಘೋಷಿಸಿದ್ದರು. ಇದೀಗ ಪೋಸ್ಟರ್ ಹಂಚಿಕೊಂಡಿದ್ದಾರೆ. ಛಾಯಾಗ್ರಹಣ, ಸಂಕಲನ ಮತ್ತು ಸಂಗೀತ ಸೇರಿದಂತೆ ಎಲ್ಲ ವಿಭಾಗಗಳಲ್ಲಿಯೂ ಪರಿಣಿತರೇ ಇರಲಿದ್ದಾರೆ ಎಂದು ತಿಳಿದು ಬಂದಿದೆ.

ಧೈರ್ಯ, ಕಾರ್ಯತಂತ್ರದ ಪ್ರತಿಭೆ ಮತ್ತು ದಾರ್ಶನಿಕ ನಾಯಕತ್ವಕ್ಕೆ ಹೆಸರಾದ ಶಿವಾಜಿ ಪಾತ್ರದಲ್ಲಿ ಅಭಿನಯಿಸುವುದು ಸುಲಭದ ಮಾತಲ್ಲ. ಡಿವೈನ್​​​ ಸ್ಟಾರ್ ಎಂದೇ ಹೆಸರಾಗಿರುವ ರಿಷಬ್ ಈ ಪಾತ್ರ ನಿಭಾಯಿಸಬಲ್ಲರು ಎಂದು ಸಾಕಷ್ಟು ಜನ ಅಭಿಪ್ರಾಯಪಟ್ಟಿದ್ದಾರೆ. ಈ ಸಿನಿಮಾ ಏಳು ಭಾಷೆಗಳಲ್ಲಿ ತೆರೆಕಾಣಲಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮರ...