ಭಾರತ, ಮಾರ್ಚ್ 29 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರನ್ನಾಗಿ ಮಾಡಲಾಗಿದೆ ಎಂದು ದೂರಲಾಗಿದೆ. ಖಾಸಗಿ ಶಾಲೆಗಳು 100 ಶೇ. ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳು ಬರುತ್ತಲೇ ಇರುತ್ತದೆ. ಆದರೆ ಇದು ಸರಕಾರಿ ಶಾಲೆಯಲ್ಲೂ ಹೀಗಾಗಿದೆ.
ಸರಕಾರಿ ಶಾಲೆಯು ಎಲ್ಲ ರೀತಿಯ ಮಕ್ಕಳಿಗೂ ಸಮಾನ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಗೆ ಪೂರಕವಾಗಿ ನಡೆದು ಬರುತ್ತಿರುವ ಕಾರಣ ಒಂದಾದರೆ, ಶೇ.100 ಫಲಿತಾಂಶ ನೀಡಬೇಕು ಎಂಬ ಇಲಾಖಾ ಒತ್ತಡವೂ ಇಲ್ಲಿ ಕೆಲಸ ಮಾಡಿದೆ ಎನ್ನಲಾಗಿದೆ.
ಪದ್ಮುಂಜದ ಸರಕಾರಿ ಶಾಲೆಯ ಶಿಕ್ಷಕ ವೃಂದ ಕೂಡ 100 ಶೇ. ಫಲಿತಾಂಶ ನೀಡಲು ಶತಪ್ರಯತ್ನ ಮಾಡುತ್ತಿದ್ದು, ಇದಕ್ಕಾಗಿ ಎರಡು ಹೆಣ್ಣು ಮಕ್ಕಳನ್ನು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನುವ ಕಾರಣಕ್ಕೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.