Bengaluru, ಮಾರ್ಚ್ 7 -- Raghaveshwara Bharathi Swamiji: ಶ್ರೀ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧ ದಾಖಲಾಗಿದ್ದ ಎರಡನೇ ಅತ್ಯಾಚಾರ ಕೇಸ್ ದುರುದ್ದೇಶದಿಂದ ಕೂಡಿದ್ದು ಎಂಬ ವಾದ ಮತ್ತು ಸಾಕ್ಷ್ಯಗಳನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿಸಿದೆ. ಅಲ್ಲದೆ, ಎರಡನೇ ಅತ್ಯಾಚಾರ ಕೇಸ್ ಅನ್ನು ರದ್ದುಗೊಳಿಸಿದೆ ಎಂದು ಮಠದ ಮೂಲಗಳು ತಿಳಿಸಿವೆ. ಬಾಲ್ಯದಲ್ಲಿ ಮಠದ ಗುರುಕುಲದಲ್ಲೇ ಶಿಕ್ಷಣ ಪಡೆದಿದ್ದ ಮಹಿಳೆಯೊಬ್ಬರು 2015ರಲ್ಲಿ ರಾಘವೇಶ್ವರ ಸ್ವಾಮೀಜಿ ವಿರುದ್ಧ ಗಿರಿನಗರ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಬಳಿಕ ಸಿಐಡಿ ಪೊಲೀಸರು ಇದರ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು.

ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಶುಕ್ರವಾರ (ಮಾರ್ಚ್ 7) ದೊಡ್ಡ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಎರಡನೇ ಅತ್ಯಾಚಾರ ಕೇಸ್ ದುರುದ್ದೇಶದಿಂದ ಕೂಡಿದ್ದು ಎಂಬ ವಾದ ಮತ್ತು ಸಾಕ್ಷ್ಯಗಳನ್ನು ಪುರಸ್ಕರಿಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ...