ಭಾರತ, ಫೆಬ್ರವರಿ 22 -- Cabinet Minister Rank Dispute: ಸಂಪುಟ ದರ್ಜೆ ಸ್ಥಾನಮಾನ ನೀಡುವ ಮೂಲಕ ಲಾಭದಾಯಕ ಹುದ್ದೆ ಒದಗಿಸಿದ ವಿವಾದ ನ್ಯಾಯಾಲಯದ ಮೆಟ್ಟಿಲೇರಿದ್ದು, ಈ ವಿಚಾರವಾಗಿ ಕರ್ನಾಟಕ ಸರ್ಕಾರ ಮತ್ತು 42 ಶಾಸಕರಿಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್ ಜಾರಿಗೊಳಿಸಿದೆ.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಕೋಣನ ಕುಂಟೆ ಕ್ರಾಸ್‌ ನಿವಾಸಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಎಂಜಿನಿಯರ್ ಸೂರಿ ಪಾಯಲ ಈ ಕುರಿತು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆಯನ್ನು ಶುಕ್ರವಾರ ನಡೆಸಿತು. ಇದೇ ವೇಳೆ, ಕರ್ನಾಟಕ ಸರ್ಕಾರ ಮತ್ತು 42 ಶಾಸಕರಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಪ್ರತ್ಯುತ್ತರ ನೀಡಬೇಕು ಎಂದು ಸೂಚಿಸಿದೆ.

ಸಂಪುಟ ದರ್ಜೆ ಸ್ಥಾನಮಾನ ಹೊಂದಿರುವ ಪ್ರತಿವಾದಿ ಶಾಸಕರುಗಳಿಗೆ ಹ್ಯಾಂಡ್‌ ಸಮನ್ಸ್‌ ಜಾರಿಗೊಳಿಸಲು ಕರ್ನಾಟಕ ಹೈಕೋರ್ಟ್‌ ನ್ಯಾಯಪೀಠ ಆದೇಶಿಸಿತು. ಇದೇ ವೇಳೆ, ಈ ಪ...