ಭಾರತ, ಮಾರ್ಚ್ 24 -- ಬೆಂಗಳೂರು: 'ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುತ್ತೇವೆ' ಎಂಬ ವಿಚಾರವನ್ನು ನಾನು ಪ್ರಸ್ತಾಪಿಸಿಯೇ ಇಲ್ಲ, ಬಿಜೆಪಿ ನನ್ನ ಹೇಳಿಕೆಯನ್ನು ತಿರುಚುತ್ತಿದೆ' ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಅಲ್ಲದೇ ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಹೇಳಿದ್ದಾರೆ.

ಡಿಕೆಶಿ ಸಂವಿಧಾನವನ್ನು ಬದಲಾಯಿಸಬೇಕೆಂದು ಪ್ರತಿಪಾದಿಸಿದ್ದಾರೆ ಎಂಬ ಬಿಜೆಪಿಯ ಆರೋಪವನ್ನು ಅವರು ನಿರಾಕರಿಸಿದ್ದಾರೆ. ಬಿಜೆಪಿ ಉದ್ದೇಶಪೂರ್ವಕವಾಗಿ ತಮ್ಮ ಹೇಳಿಕೆಗಳನ್ನು ತಿರುಚಿದೆ. ಸಂವಿಧಾನವನ್ನು ತಿದ್ದುಪಡಿ ಮಾಡಲು ನಾನು ಎಂದಿಗೂ ಸೂಚಿಸಿಲ್ಲ ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಾತ್ರವಲ್ಲ, ತಮ್ಮ ರಾಜಕೀಯ ಅನುಭವ ಬಗ್ಗೆಯೂ ಒತ್ತಿ ಹೇಳಿದ್ದಾರೆ. 'ನಾನು 36 ವರ್ಷಗಳಿಂದ ಶಾಸಕನಾಗಿದ್ದೇನೆ ಮತ್ತು ನನ್ನ ಜವಾಬ್ದಾರಿಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ. ನನಗೆ ಮೂಲಭೂತ ಸಾಮಾನ್ಯ ಜ್ಞಾನವಿದೆ ಮತ್ತು ಸಂವಿಧಾನವನ್ನು...