ಭಾರತ, ಜುಲೈ 23 -- ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಶುರುವಾಗಿದ್ದು, ಜುಲೈ 29 ರಿಂದ ಆಪರೇಷನ್ ಸಿಂದೂರ ಕುರಿತು ಸಂಸತ್ತಿನ ಎರಡೂ ಸದನಗಳಲ್ಲಿ ವಿಶೇಷ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ವಿಶೇಷ ಚರ್ಚೆಗಾಗಿ ಸರ್ಕಾರವು ಮುಂಗಾರು ಅಧಿವೇಶನದಲ್ಲಿ 16 ಗಂಟೆಗಳನ್ನು ಮೀಸಲಿಡುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ಬುಧವಾರ ವರದಿ ಮಾಡಿವೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಿಚಾರವಾಗಿ ಮಾತನಾಡಬೇಕು ಎಂದು ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲೂ ಪ್ರಧಾನಿ, ಕೇಂದ್ರ ಗೃಹ ಸಚಿವ, ರಕ್ಷಣಾ ಸಚಿವರು ಹೇಳಿಕೆ ನೀಡಬೇಕು ಎಂಬ ಒತ್ತಾಯ, ಆಗ್ರಹ ಹೆಚ್ಚಾಗಿರುವ ಕಾರಣ ಸರ್ಕಾರವೂ ಈ ಬಗ್ಗೆ ಗಮನಹರಿಸಬಹುದು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ರಾಜ್ಯಸಭೆಯ ಕಲಾಪ ಸಲಹಾ ಸಮಿತಿ ಸಭೆ ಬುಧವಾರ ನಡೆದಿದ್ದು, ಜುಲೈ 29 ರಂದು ಮೇಲ್ಮನೆಯಲ್ಲಿ ಆಪರೇಷನ್ ಸಿಂದೂರ ಕುರಿತ ಚರ್ಚೆ ನಡೆಸಲು ತೀರ್ಮಾನಿಸಿತು ಎಂದು ಎಎನ್‌ಐ ವರದಿ ಮಾಡಿದೆ. ಮುಂದ...