ಭಾರತ, ಜನವರಿ 26 -- ಚೊಚ್ಚಲ ಖೋ ಖೋ ಮಹಿಳೆಯರ ವಿಶ್ವಕಪ್ (Kho kho women world cup) ಚಾಂಪಿಯನ್ ಪಟ್ಟ ಅಲಂಕರಿಸಿದ ಗೆಲುವಿನ ಬಳಿಕ ಇದೇ ಮೊದಲ ಬಾರಿಗೆ ತವರಿಗೆ ಆಗಮಿಸಿದ ಭಾರತ ತಂಡದ ಚೈತ್ರಾ ಅವರಿಗೆ ಮೈಸೂರು ಜಿಲ್ಲೆಯ ಟಿ ನರಸೀಪುರ ಮತ್ತು ಹುಟ್ಟೂರು ಕುರುಬೂರು ಗ್ರಾಮಸ್ಥರು ಮತ್ತು ವಿದ್ಯಾಭ್ಯಾಸ ಮಾಡಿದ ಶಾಲೆಯ ವತಿಯಿಂದ ಅದ್ಧೂರಿ ಸ್ವಾಗತ ಕೋರಲಾಯಿತು. ಶಾಲೆಯ ವತಿಯಿಂದ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಚೈತ್ರಾ ಅವರನ್ನು ಶಾಲಾ ಸಿಬ್ಬಂದಿ‌ ಹಾಗೂ ವಿವಿಧ ಮಠಾಧೀಶರು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸಿದರು. ಚಾಮರಾಜನಗರ ಸಂಸದ ಸುನಿಲ್ ಬೋಸ್ ಅಭಿನಂದಿಸಿ 13 ಗ್ರಾಂ ಚಿನ್ನದ ಸರ ಹಾಗೂ 20 ಸಾವಿರ ನಗದು ಬಹುಮಾನ ವೈಯಕ್ತಿಕವಾಗಿ ವಿತರಿಸಿದರು.

ಇತ್ತೀಚೆಗೆ ಮುಕ್ತಾಯಗೊಂಡ ಖೋ ಖೋ ವಿಶ್ವಕಪ್​ ಟ್ರೋಫಿಗೆ ಮುತ್ತಿಕ್ಕಿದ ಭಾರತದ ವನಿತೆಯರ ತಂಡದಲ್ಲಿ ಸ್ಥಾನ ಪಡೆದಿದ್ದ ಬಿ ಚೈತ್ರಾ ಅವರು ಫೈನಲ್​ನಲ್ಲಿ ಪಂದ್ಯಶ್ರೇಷ್ಠ ಆಟದ ಜೊತೆಗೆ ಎಲ್ಲಾ ಪಂದ್ಯಗಳಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಜನವರಿ 25ರ ಶನ...