Bangalore, ಮೇ 17 -- ಬೆಂಗಳೂರು: ಸಕಲೇಶಪುರ - ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ 2025 ರ ಜೂನ್ 1 ರಿಂದ ನವೆಂಬರ್ 1, ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಮೇ 31 ರಿಂದ ನವೆಂಬರ್ 1, 2025 ರವರೆಗೆ ಶನಿವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2, 2025 ರವರೆಗೆ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ಸಹ ರದ್ದಾಗಲಿದೆ.

ಜೂನ್ 1 ರಿಂದ ಅಕ್ಟೋಬರ್ 30, 2025 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದಾಗಲಿದೆ. ಇದರ ಜೊತೆಗೆ, ಜೂನ್ 2, 2025 ರಿಂದ ಅಕ್ಟೋಬರ್ 31, 2025 ರವರೆಗ...