ಭಾರತ, ಮಾರ್ಚ್ 9 -- ಉಡುಪಿ: ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ಗೆ ಗುರುವಾರ (ಮಾರ್ಚ್ 6) ಸುಪ್ರೀಂ ಕೋರ್ಟ್ ರಿಲೀಫ್ ನೀಡಿತ್ತು. ಮಾರನೇ ದಿನವೇ (ಮಾರ್ಚ್ 7) ಉದಯನಿಧಿ ಸ್ಟಾಲಿನ್‌ ಅವರ ತಾಯಿ ದುರ್ಗಾ ಸ್ಟಾಲಿನ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಚಿನ್ನದ ಕಿರೀಟವನ್ನು ಸಮರ್ಪಿಸಿದರು. ದುರ್ಗಾ ಸ್ಟಾಲಿನ್ ಅವರು ತಮ್ಮ ಸ್ನೇಹಿತರ ಜತೆಗೆ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದರು ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.

ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ಸಂಬಂಧ ಹೊಸ ಎಫ್‌ಐಆರ್ ದಾಖಲಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ ಮಾರನೇ ದಿನವೇ ಅವರ ತಾಯಿ ದುರ್ಗಾ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿರುವುದು ಗಮನಸೆಳೆದಿದೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್...