Bengaluru, ಮೇ 24 -- ಬೆಂಗಳೂರು : ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿಈ ಬಗ್ಗೆ ಹೇಳಿಕೆ ನೀಡಿರುವ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರವೇ ಉಚಿತವಾಗಿ ಔಷಧಿಗಳನ್ನ ನೀಡುವಾಗ, ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟ ಮಾಡುವ ಮೆಡಿಕಲ್ ಶಾಪ್‌ಗಳು ಏಕೆ ಬೇಕು ಎಂದರು.

ಜನೌಷಧಿ ಕೇಂದ್ರಗಳ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಬೇರಸುವುದು ಸರಿಯಲ್ಲಿ. ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳ ಹೊರತಾಗಿ ರಾಜ್ಯದಲ್ಲಿ ಇನ್ನು 1220 ಜನೌಷಧಿ ಕೇಂದ್ರಗಳಿವೆ. ಅಲ್ಲದೇ ತಕ್ಷಣಕ್ಕೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲ ಜನೌಷಧಿ ಕೇಂದ್ರಗಳನ್ನ ಮುಚ್ಚಿಸಿ ಎಂದು ಹೇಳಿಲ್ಲ. ಹೊಸದಾಗಿ ಸಲ್ಲಿಕೆಯಾಗಿದ್ದ 31 ಪ್ರಸ್ತಾವನ...