ಭಾರತ, ಮೇ 2 -- ಕರ್ನಾಟಕದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಹಲವು ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮಿದ್ದಾರೆ. ಪ್ರತಿವರ್ಷ ಒಂದು ಎರಡು ಅಥವಾ ಕೆಲವು ವಿದ್ಯಾರ್ಥಿಗಳು ಔಟ್‌ ಆಫ್‌ ಔಟ್‌ ಅಂಕ ಪಡೆಯುತ್ತಿದ್ದರು. ಈ ಬಾರಿ ಇಂತಹ ಸಾಧನೆಯನ್ನು ಒಟ್ಟು 22 ವಿದ್ಯಾಥಿ ವಿದ್ಯಾರ್ಥಿನಿಯರು ಮಾಡಿದ್ದಾರೆ ಎನ್ನುವುದು ವಿಶೇಷ. ಅಂದರೆ, ಇಷ್ಟು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದಿದ್ದಾರೆ. ಇವರಲ್ಲಿ ಬಹುತೇಕ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ಓದಿದ್ದಾರೆ. ಆದರೆ, 2 ವಿದ್ಯಾರ್ಥಿಗಳು ಮಾತ್ರ ಸರಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ಓದಿ ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ನಗರದ ಸರ್ಕಾರಿ ಉರ್ದು ಇಂಗ್ಲಿಷ್ ಮೀಡಿಯಂ ಶಾಲೆ ವಿದ್ಯಾರ್ಥಿನಿ ಶಗುಫ್ತಾ ಅಂಜುಮ್ ಮತ್ತು ಬೆಳಗಾವಿಯ ಬೈಲಹೊಂಗಲದ ದೇವಲಾಪುರದ ಸರಕಾರಿ ಹೈಸ್ಕೂಲ್‌ನ ವಿದ್ಯಾರ್ಥಿನಿ ರೂಪಾ ಚನ್ನಗೌಡ ಪಾಟೀಲ್‌ ಈ ಸಾಧನೆ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿ ನಗರದ ಸರ...