Bengaluru, ಮಾರ್ಚ್ 18 -- ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ. ಕರ್ನಾಟಕದ ಕಂದಾಯ ಇಲಾಖೆ ಅಧಿಕಾರಿಗಳು ಮಂಗಳವಾರ ಒತ್ತುವರಿ ತೆರವು ಕಾರ್ಯಾಚರಣೆ ಶುರುಮಾಡಿದ್ದಾರೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಸ್ವಾಧೀನ ಇರುವಂತಹ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಜೆಸಿಬಿಯೊಂದಿಗೆ ಸಿದ್ದತೆ ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಕರ್ನಾಟಕ ಹೈಕೋರ್ಟ್‌ ನಿರ್ದೇಶನಾನುಸಾರ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಅಧಿಕಾರಿಗಳು ರಾಮನಗರ ಜಿಲ್ಲೆಯ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ನೆರವಿನೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆ ಶುರುಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಒತ್ತುವರಿ ತೆರವು ಕಾರ್ಯಾಚರಣೆಗೆ ಜೆಸಿಬಿ (ಅರ್ಥ ಮೂವರ್‌) ಯಂತ್ರಗಳನ್ನು ನಿಯೋಜಿಸಲಾಗಿದೆ. ಕಾನೂನು ಕ್ರಮಗಳನ್ನು ಅನುಸರಿಸುವುದಕ್ಕಾಗಿ ಅಕ್ರಮ ನಿರ್ಮಾಣಗಳನ್ನು ಸರ್ಕಾರಿ ಜಮೀನಿನಿಂದ ತ...