ಭಾರತ, ಫೆಬ್ರವರಿ 23 -- ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ಡಿಫೈನ್ಡ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಸರ್ಕಾರಿ ನೌಕರರ ಎನ್‌ಪಿಎಸ್ ಪ್ರಾನ್ ಖಾತೆಯಲ್ಲಿನ ಮೊತ್ತವನ್ನು ಹಿಂಪಡೆಯುವ ಕುರಿತಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. 2006ರ ಏಪ್ರಿಲ್‌ 1ರಂದು ಹಾಗೂ ಆನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಸರ್ಕಾರಿ ಆದೇಶದಲ್ಲಿನ ಸೂಚನೆಗಳ ಅನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ ಎಂದು ಸರ್ಕಾರದ ಮಾರ್ಗಸೂಚಿ ಹೇಳಿದೆ.

ಸರ್ಕಾರಿ ಆದೇಶದನ್ವಯ 2006 ಇಸವಿಗಿಂತ ಮುಂಚೆ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ, ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಒಂದು ಬಾರಿಯ ಕ್ರಮವಾಗಿ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆ ...