Bengaluru, ಮೇ 20 -- ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ದಿನಗಳ ಕಾಲ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ತೋಟಗಾರಿಕೆ ಇಲಾಖೆ ವತಿಯಿಂದ ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಮೇ 23ರಿಂದ 25ರವರೆಗೆ ಮಾವು ಮೇಳ ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಹೆಚ್ ಎನ್ ಗಾಯತ್ರಿ ಹೇಳಿದ್ದಾರೆ. ಮೈಸೂರಿನ ಕರ್ಜನ್ ಪಾರ್ಕ್ ಆವರಣದಲ್ಲಿರುವ ತೋಟಗಾರಿಕೆ ಇಲಾಖೆಯ ಕಚೇರಿಯಲ್ಲಿ ಈ ಸಂಬಂಧ ಮಾವು ಪ್ರದರ್ಶನ ಮತ್ತು ಮಾರಾಟ ಮೇಳದ ಪೋಸ್ಟರ್ ಅನ್ನು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಹೆಚ್ ಎನ್ ಗಾಯತ್ರಿ ಬಿಡುಗಡೆ ಮಾಡಿದರು.
ಮಾವು ಮೇಳದಲ್ಲಿ 45 ಮಳಿಗೆಗಳನ್ನು ತೆರೆಯಲಾಗುತ್ತದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಧಾರವಾಡ, ಕೊಪ್ಪಳ, ಬೆಳಗಾವಿ ಸೇರಿದಂತೆ ಒಟ್ಟು ಎಂಟು ಜಿಲ್ಲೆಗಳ ರೈತರು ಮಾವು ಮೇಳದಲ್ಲಿ ಭಾಗಿಯಾಗಲಿದ್ದಾರೆ. ಎಲ್ಲಾ ಬಗೆಯ ಮಾವುಗಳನ್ನು ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಗುತ್ತದೆ. 200ಕ್ಕೂ ಹೆಚ್ಚು ಟನ್ ಮಾವಿನ ಹಣ್ಣು ಮಾವು ಮಾರಾಟ ಮೇಳಕ್ಕೆ ಬರಲಿದೆ.
...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.