ಭಾರತ, ಫೆಬ್ರವರಿ 22 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರುವರಿ 23ರ ಭಾನುವಾರದಿಂದ ಮಾರ್ಚ್ 1ರ ಶನಿವಾರದವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ನಿಮ್ಮ ಮನಸ್ಸನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಕುಟುಂಬದ ವಿಚಾರಗಳಲ್ಲಿ ಮುಂದಾಳತ್ವ ವಹಿಸುವಿರಿ. ಅನಾರೋಗ್ಯವಿರುತ್ತದೆ. ಸಾಕುಪ್ರಾಣಿಗಳಿಂದ ತೊಂದರೆ ಇರುತ್ತದೆ. ಗೆಳೆಯರೊಬ್ಬರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ವಿಶೇಷವಾದ ಪದವಿ ಪುರಸ್ಕಾರ ದೊರೆಯುತ್ತದೆ. ಆದಾಯಕ್ಕಿಂತಲೂ ಖರ್ಚು ಹೆಚ್ಚಿನದಾಗಿರುತ್ತದೆ. ಹೊಗಳಿಕೆಗೆ ಮಾರುಹೋಗಿ ಮೋಸ ಹೋಗುವಿರಿ. ಎದುರಾಗುವ ಬದಲಾವಣೆಗಳಿಗೆ ಹೊಂದಿಕೊಂಡು ನಡೆಯುವ...