Bengaluru, ಏಪ್ರಿಲ್ 26 -- ಶ್ರೀ ಅಖಿಲ ಹವ್ಯಕ ಮಹಾಸಭೆಯು ನೀಡುವ ವಾರ್ಷಿಕ ಹವ್ಯಕ ವಿಶೇಷ ಪ್ರಶಸ್ತಿಗೆ 2024-25ರ ಸಾಲಿನ ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಏಪ್ರಿಲ್ 27 ಭಾನುವಾರದಂದು ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ನಡೆಯುವ 82ನೆಯ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿವಿಧ ಕ್ಷೇತ್ರದಲ್ಲಿ ಅಪರಿಮಿತ ಸಾಧನೆ ಮಾಡಿರುವ ಹವ್ಯಕ ಬ್ರಾಹ್ಮಣ ಸಮುದಾಯದರಿಗೆ ಹವ್ಯಕ ವಿಭೂಷಣ, ಹವ್ಯಕ ಭೂಷಣ, ಹವ್ಯಕ ಶ್ರೀ,ಹವ್ಯಕ ಸೇವಾಶ್ರೀ ಪ್ರಶಸ್ತಿ ನೀಡಲಾಗುತ್ತಿದೆ.ಸಮಾಜದ ಅರ್ಹ ಸಾಧಕರನ್ನು ಗುರುತಿಸಿ; ಆಯ್ಕೆಯ ಮಾನದಂಡಗಳ ಅನ್ವಯ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಮಹಾಸಭೆಯ ಸದಸ್ಯರುಗಳು ಪ್ರಶಸ್ತಿಗೆ ಹೆಸರುಗಳನ್ನು ಸೂಚಿಸಬಹುದಾಗಿದ್ದು; ಸ್ವಯಂ ಅಭ್ಯರ್ಥಿಗಳೇ ಪ್ರಶಸ್ತಿಗಾಗಿ ಅರ್ಜಿಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೆಯೇ ಇದೇ ಸಂದರ್ಭದಲ್ಲಿ ವಿಶೇಷ ಸಾಧನೆಗಳನ್ನು ಮಾಡಿದ ವಿದ್ಯಾರ್ಥಿಗಳಿಗೆ 'ಪಲ್ಲವ' ಪ್ರಶಸ್ತಿಯನ್ನು ನೀಡಿ ಮಕ್ಕಳಿಗೆ ಪ...