ಭಾರತ, ಏಪ್ರಿಲ್ 30 -- ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇವಾಲಯದಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಈ ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಪ್ರಧಾನಿ ಮೋದಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ನೀಡುವುದಾಗಿ ಮೋದಿ ತಿಳಿಸಿದ್ದಾರೆ.

'ಆಂಧ್ರಪ್ರದೇಶದ ವಿಶಾಖಪಟ್ಟಣದ ಸಿಂಹಾಚಲಂ ದೇವಾಲಯ ಗೋಡೆ ಕುಸಿದು ಜೀವ ಕಳೆದುಕೊಂಡವರ ವಿಚಾರ ತಿಳಿದು ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ...