Mysuru, ಜನವರಿ 31 -- ಮೈಸೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನನಗೆ ಪದೇ ಪದೇ ಪ್ರಶ್ನೆಯನ್ನು ಕೇಳಬೇಡಿ. ಏಕೆಂದರೆ ಕಾಂಗ್ರೆಸ್‌ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೊ ಅದೇ ಆಗುತ್ತದೆ.ಎಲ್ಲದನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ವಿಚಾರದ ಬಗ್ಗೆ ನಾನು ಎಷ್ಟು ಬಾರಿ ಸ್ಪಷ್ಟೀಕರಣ ಕೊಡಲಿ ಹೇಳಿ. ಇಬ್ಬರು ಮೂವರು ಸಚಿವರು ಜೊತೆಯಲ್ಲಿ ಕುಳಿತು ಮಾತನಾಡಿದ ತಕ್ಷಣ ಅದನ್ನೇ ಇದೇ ವಿಚಾರ ಎಂದು ಏಕೆ ಗ್ರಹಿಸುತ್ತೀರಾ. ಮೂರ್ನಾಲ್ಕು ಜನ ಸೇರಿದಾಗ ರಾಜಕೀಯ ಚರ್ಚೆ ಮಾಡುತ್ತೇವೆ. ನನ್ನ ಪ್ರಕಾರ ಡಿನ್ನರ್ ಮೀಟಿಂಗ್ ಹಾಗೂ ಸಭೆ ಮಾಡುವುದರಲ್ಲಿ ತಪ್ಪೇ ಇಲ್ಲ. ನೀವು ಅದರಲ್ಲಿ ಹುಡುಕುವ ಗ್ರಹಿಕೆ ಸರಿ ಇಲ್ಲ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಂಚ ಖಡಕ್‌ ಆಗಿಯೇ ಹೇಳಿದರು.

ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೆಲಿಕಾಪ್ಟರ್‌ನಲ್ಲಿ ಶುಕ್ರವಾರ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

Published b...